Breaking News

ಕುಂಬಳೆ: ಪುತ್ರ ಚಲಾಯಿಸಿದ ಸ್ಕೂಟರ್‌ನಿಂದ ಬಿದ್ದು ತಾಯಿ ಸಾವು

ಕುಂಬಳೆ: ಪುತ್ರ ಚಲಾಯಿಸುತ್ತಿದ್ದ ಸ್ಕೂಟರ್‌ನಿಂದ ರಸ್ತೆಗೆಸೆಯಲ್ಪಟ್ಟು ತಾಯಿ ಸಾವಿಗೀಡಾದ ಘಟನೆ ಸಂಭವಿಸಿದೆ. ಕುಂಬಳೆ ಸುನಾಮಿ ಕಾಲನಿಯ ಮೊಯ್ದೀನ್‌ ಕುಂಞಿ ಅವರ ಪತ್ನಿ ಹಾತಿಕ (48) ಸಾವಿಗೀಡಾದವರು. ಸ್ಕೂಟರ್‌ ಚಲಾಯಿಸಿದ ಪುತ್ರ ಮುಬಾರಕ್‌ (19) ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಜೂ.19 ರಂದು ರಾತ್ರಿ ಕುಂಬಳೆ ರಾಷ್ಟ್ರೀಯ ಹೆದ್ದಾರಿಯ ದೇವಿನಗರದ ಸರ್ವಿಸ್‌ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಹಾತಿಕ ಅವರನ್ನು ಆಸ್ಪತ್ರೆಗೆ ತಲುಪಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *