Breaking News

ನವಲಗುಂದದಲ್ಲಿ ಯುವಕನಿಗೆ ಚಾಕು ಇರಿತ, ಕಿಮ್ಸ್‌ ಆಸ್ಪತ್ರೆಗೆ ದಾಖಲು

ನವಲಗುಂದ: ಸ್ಥಳೀಯ ಶೆಟ್ಟರ ಕೆರೆ ಬಳಿ ಶನಿವಾರ ಮಧ್ಯಾಹ್ನ ಆಕಾಶ ವಡ್ಡರ ಎಂಬ ಯುವಕನಿಗೆ ಅಪರಿಚಿತ ವ್ಯಕ್ತಿಯೊಬ್ಬರು ಚಾಕುವಿನಿಂದ ಇರಿದು, ಪರಾರಿಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸಾರ್ವಜನಿಕರ ನೆರವಿನೊಂದಿಗೆ ಆಕಾಶ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಥಮ ಚಿಕಿತ್ಸೆ ನೀಡಿದ ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ‘ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಚಾಕು ಇರಿದ ಆರೋಪಿಯ ಪತ್ತೆಗಾಗಿ ಕ್ರಮಕೈಗೊಂಡಿದ್ದೇವೆ’ ಎಂದು ಪಿಎಸ್‌ಐ ಜನಾರ್ಧನ ಭಟ್ರಳ್ಳಿ ತಿಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *