Breaking News

ಕಲಬುರಗಿ ಹೈಕೋರ್ಟ್ ಸಿಬ್ಬಂದಿ ತೆರಳುತ್ತಿದ್ದ ಕಾರು ಗೋವಾದಲ್ಲಿ ಅಪಘಾತ: ಓರ್ವ ಮೃತ್ಯು, ಮೂವರಿಗೆ ಗಂಭೀರ ಗಾಯ

ಗೋವಾ ಪ್ರವಾಸಕ್ಕೆ ತೆರಳಿದ್ದ ಕಲಬುರಗಿ ಹೈಕೋರ್ಟ್‌ನ ನಾಲ್ವರು ಸಿಬ್ಬಂದಿ ಪ್ರಯಾಣಿಸುತ್ತಿದ್ದ ಕಾರು ಶನಿವಾರ ಮಾರ್ಡೋಳ ಪೊಲೀಸ್ ಠಾಣಾ ವ್ಯಾಪ್ತಿಯ ಬಾನಶ್ರೀ ಬಮ್ಮಾ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಕಾರು ನಿಯಂತ್ರಣ ತಪ್ಪಿ ದೇವಸ್ಥಾನದ ಕಟ್ಟಡದ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಆಸನದಲ್ಲಿದ್ದ ಓರ್ವ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹವನ್ನು ಮಡಗಾಂವಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮಾರ್ಡೋಳ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *