Breaking News

ಗಂಡು ಮಗುವಿಗೆ 8 ಲಕ್ಷ ರೂ, ಹೆಣ್ಣು ಮಗುವಿಗೆ 4 ಲಕ್ಷ ರೂ: ರಾಜಧಾನಿಯನ್ನು ಬೆಚ್ಚಿಬೀಳಿಸಿದ ‘ಬೇಬಿ ಬಜಾರ್’

ಹಸುಗೂಸುಗಳ ಖರೀದಿ-ಮಾರಾಟ ನಡೆಸುತ್ತಿದ್ದ ಜಾಲವೊಂದನ್ನು ಪೊಲೀಸರು ಭೇದಿಸಿದ್ದು, ಬಡ ಕುಟುಂಬಗಳಿಂದ ಮಕ್ಕಳನ್ನು ಪಡೆದು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಗಂಡು ಮಗುವನ್ನು ₹8 ಲಕ್ಷ ಹಾಗೂ ಹೆಣ್ಣು ಮಗುವನ್ನು ₹4 ಲಕ್ಷಕ್ಕೆ ಮಾರಾಟ ಮಾಡಲಾಗುತ್ತಿತ್ತು. ನಕಲಿ ಗ್ರಾಹಕರಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಜಾಲವನ್ನು ಪತ್ತೆಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಐದು ನವಜಾತ ಶಿಶುಗಳನ್ನು ರಕ್ಷಿಸಲಾಗಿದ್ದು, 30ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ತನಿಖೆ ಮುಂದುವರಿದಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *