Breaking News

ನಾಗಸಂದ್ರ ಮೆಟ್ರೋ ಸ್ಟೇಷನ್‌ ಬಳಿ ಬೆಂಕಿ ಅವಘಡ – ಆತಂಕದಲ್ಲಿ ಪ್ರಯಾಣಿಕರು

ಬೆಂಗಳೂರು ನಗರದ ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಪ್ರಾಣಹಾನಿ ಅಥವಾ ಆಸ್ತಿನಷ್ಟದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇನ್ನೊಂದೆಡೆ, ಇ-ಕಾಮರ್ಸ್ ಡೀಲರ್ ಯಾಸಿನ್ ಆಲಿ ಅವರ ಮನೆಗೆ ನುಗ್ಗಿದ ರೌಡಿ ಗ್ಯಾಂಗ್‌ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಸ್ಕೋಡಾ ಕಾರು, ಸ್ಕೂಟರ್, ನಾಲ್ಕು ಐಫೋನ್‌ಗಳು ಹಾಗೂ ನಗದು ದೋಚಿ ಪರಾರಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು ಇಬ್ರಾಹಿಂ ಮತ್ತು ವಿಜಯ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಸೂತ್ರಧಾರಿ ರೌಡಿಶೀಟರ್ ರುಬೇನ್‌ನನ್ನು ಕಸ್ಟಡಿಗೆ ಪಡೆಯಲು ಕ್ರಮ ಕೈಗೊಂಡಿದ್ದಾರೆ. ತನಿಖೆ ಮುಂದುವರಿದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *