ರಾಯಚೂರು: ವ್ಯಕ್ತಿಯೊಬ್ಬರ ರುಂಡ ಕತ್ತರಿಸಿ ಕೊಲೆ ಮಾಡಿದ ಆರೋಪಿಗಳು ಪರಾರಿಯಾದ ಘಟನೆ ರಾಯಚೂರಿನ ಕುಲಸುಂಬಿ ಕಾಲೋನಿಯಲ್ಲಿ ನಡೆದಿದೆ.ತಿರುಪತಿ (38) ಮೃತ ವ್ಯಕ್ತಿ. ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆ ಘಟನೆ ಬೆಳಕಿಗೆ ಬಂದಿದೆ. ಅಕ್ಕಪಕ್ಕದವರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗಿಲು ಬೀಗ ಮುರಿದು ಒಳಗೆ ನುಗ್ಗಿದ ಪೊಲೀಸರಿಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತ ತಿರುಪತಿ ವಿರುದ್ಧ ಬೈಕ್ ಕಳ್ಳತನ ಪ್ರಕರಣವಿತ್ತು. ಹಳೆಯ ವೈಷಮ್ಯ ಅಥವಾ ಪಾರ್ಟಿ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಅನುಮಾನವಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗಳಿಗಾಗಿ ಪೊಲೀಸ್ ಹುಡುಕಾಟ ಆರಂಭವಾಗಿದೆ. ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

