Breaking News

ಪ್ರಯಾಣಿಕರನ್ನು ತಡೆದು ದಾಖಲೆ ಪರಿಶೀಲನೆ ಆರೋಪ: 6 ಮಂದಿ ವಿರುದ್ಧ ಪ್ರಕರಣ ದಾಖಲು

ಮೈಸೂರು: ರೈಲು ನಿಲ್ದಾಣದಲ್ಲಿದ್ದ ಪಶ್ಚಿಮ ಬಂಗಾಳದ ಪ್ರಯಾಣಿಕರನ್ನು ನಿಯಮಬಾಹಿರವಾಗಿ ತಡೆದು ವಿಚಾರಣೆ ನಡೆಸಿದ ಹಿಂದೂ ಜಾಗರಣ ವೇದಿಕೆಯ ಆರು ಜನರ ವಿರುದ್ಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಭಾನುವಾರ ರೈಲು ನಿಲ್ದಾಣದೊಳಗೆ ತೆರಳಿ ಪ್ರಯಾಣಿಕರನ್ನು ತಡೆದು ನೀವು ಎಲ್ಲಿಯವರು, ನಿಮ್ಮಲ್ಲಿ ದಾಖಲೆ ಏನಿವೆ ಎಂದು ಪ್ರಶ್ನಿಸಿದ್ದಾರೆ. ಮೈಸೂರಿಗೆ ಕೆಲಸಕ್ಕಾಗಿ ಬರುತ್ತಿದ್ದ ತಂಡವನ್ನು ನೀವು ಬಾಂಗ್ಲಾ ವಲಸಿಗರು, ನಿಮ್ಮ ದಾಖಲೆ ತೋರಿಸಿ ಎಂದು ಬೆದರಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದರು. ‘ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾದಾಗ ಪೊಲೀಸರು ತೆರಳಿ, ದಾಖಲೆಗಳನ್ನು ಪರಿಶೀಲಿಸಿದಾಗ ಅವರೆಲ್ಲರೂ ಭಾರತೀಯರು ಎಂಬುದು ಸಾಬೀತಾಗಿದೆ. ರೈಲು ಆವರಣಕ್ಕೆ ನುಗ್ಗಿ ನಿಯಮಬಾಹಿರವಾಗಿ ನಡೆದುಕೊಂಡ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಿದ್ದೇವೆ’ ಎಂದರು. ಈ ಕುರಿತ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *