ಬೆಂಗಳೂರು ದರೋಡೆ ಪ್ರಕರಣದಲ್ಲಿ ಬಂಧಿತ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ವಿರುದ್ಧ ಭೂ ಹಗರಣದ ಆರೋಪವೂ ಕೇಳಿಬಂದಿದೆ. ಐಒಸಿಗೆ ಸೇರಿದ 1.53 ಕೋಟಿ ರೂ. ಮೌಲ್ಯದ ಜಾಗ ಒತ್ತುವರಿಗೆ ನೆರವಾಗಿದ್ದಾನೆ ಎನ್ನಲಾಗಿದೆ. ಪೆಟ್ರೋಲ್ ಬಂಕ್ ನಿರ್ಮಾಣಕ್ಕಾಗಿ ಹಾಕಿದ್ದ ವ್ಯವಸ್ಥೆಯನ್ನು ಧ್ವಂಸಗೊಳಿಸಿ ಬೆದರಿಕೆ ಹಾಕಿದ ಆರೋಪವೂ ಆತನ ಮೇಲಿದೆ. ಈ ಸಂಬಂಧ ಮಾಜಿ ಕಾರ್ಪೊರೇಟರ್ ಸೇರಿದಂತೆ ಇತರರೊಂದಿಗೆ ಕೈಜೋಡಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಇದೇ ವೇಳೆ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇದೆ ಎಂದು ಸುಳ್ಳು ಮಾಹಿತಿ ನೀಡಿ ಸರ್ಕಾರವನ್ನು ದಾರಿ ತಪ್ಪಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

