Breaking News

ದಾವಣಗೆರೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ 19ರ ಹರೆಯದ ನವ ವಿವಾಹಿತೆ ಮೃತದೇಹ ಪತ್ತೆ

ದಾವಣಗೆರೆ ನಗರದ ರಾಮನಗರದಲ್ಲಿ 19 ವರ್ಷದ ನವವಿವಾಹಿತೆ ಅಮೂಲ್ಯ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ಅಮೂಲ್ಯ ಮತ್ತು ಧನುಷ್ ಪ್ರೀತಿಸಿ ಮದುವೆಯಾಗಿದ್ದು, ಮದುವೆಯಾಗಿ ಒಂದು ವರ್ಷವಾಗಿತ್ತು. ಕುಟುಂಬದಲ್ಲಿ ಸಮಸ್ಯೆಗಳಿದ್ದವು ಎನ್ನಲಾಗಿದ್ದು, ಅಮೂಲ್ಯ ಸಾವಿನ ಕುರಿತು ಆಕೆಯ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆಯ ಬಳಿಕ ಪತಿ ಧನುಷ್ ಹಾಗೂ ಆತನ ಪೋಷಕರು ನಾಪತ್ತೆಯಾಗಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *