Breaking News

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಯುವಕ ಸೇರಿ ನಾಲ್ವರಿಗೆ 20 ವರ್ಷ ಜೈಲು

ಶಿವಮೊಗ್ಗ: ಅಪ್ರಾಪ್ತೆಯನ್ನು ಮದುವೆಯಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದ ಯುವಕ ಹಾಗೂ ಅದಕ್ಕೆ ಸಹಕರಿಸಿದ ಮೂವರಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1)ವು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.85 ರೂ.ದಂಡ ವಿಧಿಸಿದೆ. ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದೆ. ಶಿವಮೊಗ್ಗ ತಾಲೂಕಿನ 27 ವರ್ಷದ ಯುವಕ ಸೇರಿ ನಾಲ್ವರು ಶಿಕ್ಷೆಗೆ ಒಳಗಾದವರು. ಯುವಕ 2024ರಲ್ಲಿ 17 ವರ್ಷದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಬಾಲ್ಯ ವಿವಾಹವಾಗಿದ್ದ. ಬಳಿಕ ಲೈಂಗಿಕ ದೌರ್ಜನ್ಯ ನಡೆಸಿದ್ದು, ಈ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ, ಪೋಕ್ಸೋ ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿಯಾಗಿದ್ದ ಕುಂಸಿ ಠಾಣೆಯ ಇನ್‌ಸ್ಪೆಕ್ಟರ್ ಹರೀಶ್ ಕೆ. ಪಾಟೀಲ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎ-1ರಿಂದ ಎ-4ವರೆಗಿನ ತಪ್ಪಿತಸ್ಥರಿಗೆ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ನ್ಯಾಯಾಲಯದಲ್ಲಿ ಸರ್ಕಾರಿ ಅಭಿಯೋಜಕ ಶ್ರೀಧರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

Share News

About BigTv News

Check Also

ಚಿತ್ತಾಪುರದಲ್ಲಿ ರಸ್ತೆ ಕಾಮಗಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ; ಹಲವರಿಗೆ ಗಾಯ

ಕಲಬುರಗಿ: ಚಿತ್ತಾಪುರ ತಾಲೂಕಿನ ರಾಂಪುರಹಳ್ಳಿಯಲ್ಲಿ ರಸ್ತೆ ಕಾಮಗಾರಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ರಸ್ತೆ …

Leave a Reply

Your email address will not be published. Required fields are marked *