Breaking News

ಹಣ ಹೂಡಿಕೆ ಮಾಡಿ 2 ಕೋಟಿ ಕಳೆದುಕೊಂಡ ರೈತ

ಇನ್‌ಸ್ಟಾಗ್ರಾಂನಲ್ಲಿ ಕಂಡ ಟ್ರೇಡಿಂಗ್ ಜಾಹೀರಾತನ್ನು ನಂಬಿದ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ 32 ವರ್ಷದ ಯುವ ರೈತ ಸೈಬರ್ ವಂಚಕರ ಬಲೆಗೆ ಬಿದ್ದು 2.05 ಕೋಟಿ ರೂ. ಕಳೆದುಕೊಂಡಿದ್ದಾರೆ. ವಂಚಕರು ನಕಲಿ ವೆಬ್‌ಸೈಟ್ ಮೂಲಕ ಬ್ಯಾಂಕ್ ಮಾಹಿತಿ ಪಡೆದು ರೈತನ ಹೆಸರಿನಲ್ಲಿ ನಕಲಿ ಡಿ-ಮ್ಯಾಟ್ ಖಾತೆ ಸೃಷ್ಟಿಸಿದ್ದರು. ಟೆಲಿಗ್ರಾಂ ಗ್ರೂಪ್‌ನಲ್ಲಿ ಸುಳ್ಳು ಲಾಭದ ಸ್ಕ್ರೀನ್‌ಶಾಟ್‌ಗಳನ್ನು ತೋರಿಸಿ ನಂಬಿಸಿದ ವಂಚಕರು, ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದರು. ಇದನ್ನು ನಂಬಿದ ರೈತ 2023ರಿಂದ 2026ರ ಏಪ್ರಿಲ್‌ವರೆಗೆ ಹಂತ ಹಂತವಾಗಿ 2.05 ಕೋಟಿ ರೂ. ಹೂಡಿಕೆ ಮಾಡಿದ್ದರು. ನಂತರ ಹಣ ಹಿಂಪಡೆಯಲು ಕೇಳಿದಾಗ ಇನ್ನಷ್ಟು ಲಾಭ ಸಿಗುತ್ತದೆ ಎಂದು ಹೇಳಿ ಕಾಲಹರಣ ಮಾಡಿದ ವಂಚಕರು, ಕೊನೆಗೆ ಡಿ-ಮ್ಯಾಟ್ ಖಾತೆಯನ್ನು ಬ್ಲಾಕ್ ಮಾಡಿ ಸಂಪರ್ಕ ಕಡಿತಗೊಳಿಸಿದ್ದಾರೆ. ಈ ಕುರಿತು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *