Breaking News

ಸಹೋದರಿಯ ಕೊ*ಲೆಗೆ ಯತ್ನಿಸಿದ ಸಹೋದರನ ಮೃತದೇಹ ಪತ್ತೆ

ಮುಳ್ಳೇರಿಯ: ಸಹೋದರಿಯ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸರಿಂದ ಬಂಧಿತನಾಗಿ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡ ಸಹೋದರ ಮನೆಯಲ್ಲಿ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಆದೂರು ಠಾಣಾ ವ್ಯಾಪ್ತಿಯ ಅಡೂರು ಚಾಮೆಕೊಚ್ಚಿಯ ಶ್ರೀಕೃಷ್ಣ ನಿಲಯದ ರಘುರಾಮ ರಾವ್‌ ಅವರ ಪುತ್ರ ಕೃಷ್ಣ ಪ್ರಸಾದ್‌ (34) ಸಾವಿಗೀಡಾದ ವ್ಯಕ್ತಿ.ಶನಿವಾರ ಸಂಜೆ ಮನೆಯೊಳಗೆ ನೆಲದಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮನೆಯಿಂದ ದುರ್ಗಂಧ ಹರಡಲಾರಂಭಿಸಿದ ಹಿನ್ನೆಲೆಯಲ್ಲಿ ಪರಿಸರ ನಿವಾಸಿಗಳು ಬಂದು ನೋಡಿದಾಗ ಮೃತದೇಹ ಪತ್ತೆಯಾಯಿತು. ಬಳಿಕ ವಾರ್ಡ್ ಸದಸ್ಯೆ ಆದೂರು ಪೊಲೀಸರಿಗೆ ತಿಳಿಸಿದರು. ಮೃತದೇಹವನ್ನು ಕಾಸರಗೋಡು ಜನರಲ್‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಮನೆಯಲ್ಲಿ ಇವರೊಬ್ಬರೇ ವಾಸಿಸುತ್ತಿದ್ದರು. ಮನೆಯವರೆಲ್ಲರೂ ಬೆಂಗಳೂರಿನ ಸಹೋದರಿಯ ಮನೆಯಲ್ಲಿ ವಾಸವಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಸೂಚಿಸಿದೆ. ಆದೂರು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *