ಬೀದರ್ ಜಿಲ್ಲೆಯ ಚಿದ್ರಿ ಗ್ರಾಮದಲ್ಲಿ ಮದುವೆ ಸಮಾರಂಭಕ್ಕೆ ತೆರಳಿದ್ದ ಕುಟುಂಬದ ಮನೆಯಲ್ಲಿ ಭಾರಿ ಕಳ್ಳತನ ನಡೆದಿದೆ. ರಾಜಕುಮಾರ ಬಿರಾದರ್ ಅವರ ಕುಟುಂಬ ಮನೆಗೆ ಮರಳಿದಾಗ ಮುಖ್ಯ ದ್ವಾರದ ಬೀಗ ಒಡೆದು ಕಳ್ಳರು ಮನೆಗೆ ನುಗ್ಗಿರುವುದು ಬೆಳಕಿಗೆ ಬಂದಿದೆ. ಕಳ್ಳರು ಬೆಡ್‌ರೂಮ್‌ನ ಅಲ್ಮೇರಾವನ್ನು ಒಡೆದು ಸುಮಾರು 150 ಗ್ರಾಂ ಚಿನ್ನದ ಆಭರಣ, 100 ಗ್ರಾಂ ಬೆಳ್ಳಿ ಆಭರಣ ಹಾಗೂ 1.50 ಲಕ್ಷ ರೂ. ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಕಳುವಾದ ಆಸ್ತಿಯ ಮೌಲ್ಯ 20 ಲಕ್ಷ ರೂ.ಗೂ ಅಧಿಕ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಗಾಂಧಿಗಂಜ್ ಪೊಲೀಸರು ಹಾಗೂ ಎಸ್‌ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರ ಸಹಾಯದಿಂದ ತನಿಖೆ ನಡೆಸಲಾಗುತ್ತಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

