Breaking News

ಕೊಳ್ಳೆ ಹೊಡೆದ ಹಣಕ್ಕೆ ಜಗಳ? – ತಲೆಕಡಿದ ಸ್ಥಿತಿಯಲ್ಲಿ ಕಳ್ಳನ ಶವ ಪತ್ತೆ!

ರಾಯಚೂರು ಜಿಲ್ಲೆಯ ಕುಲಸುಂಬಿ ಕಾಲೋನಿಯ ಬಾಡಿಗೆ ಮನೆಯಲ್ಲಿ 35 ವರ್ಷದ ತಿರುಪತಿ ಎಂಬಾತನ ತಲೆ ಇಲ್ಲದ ಕೊಳೆತ ಮೃತದೇಹ ಪತ್ತೆಯಾಗಿದ್ದು, ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮನೆಗೆ ಹೊರಗಿನಿಂದ ಬೀಗ ಹಾಕಲಾಗಿದ್ದ ಕಾರಣ ಪೊಲೀಸರು ಬಾಗಿಲು ಮುರಿದು ಒಳಪ್ರವೇಶಿಸಿದಾಗ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ತಲೆ ಇಲ್ಲದ ಶವ ಪತ್ತೆಯಾಗಿದೆ. ಹಂತಕರು ಕೊಲೆ ಮಾಡಿ ಮೃತನ ತಲೆಯನ್ನು ಕೊಂಡೊಯ್ದಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹದ ಸ್ಥಿತಿಯನ್ನು ಗಮನಿಸಿದರೆ ಮೂರು-ನಾಲ್ಕು ದಿನಗಳ ಹಿಂದೆಯೇ ಕೊಲೆ ನಡೆದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಹಳೆಯ ವೈಷಮ್ಯ ಅಥವಾ ಕಳ್ಳತನಕ್ಕೆ ಸಂಬಂಧಿಸಿದ ವಿಚಾರವೇ ಕೊಲೆಗೆ ಕಾರಣವಾಗಿರಬಹುದೆಂಬ ಶಂಕೆಯಲ್ಲಿ ಪಶ್ಚಿಮ ಪೊಲೀಸ್ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *