ಮೈಸೂರು ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಶಿವಣ್ಣ, ಅವರ ಪತ್ನಿ ನಾಗರತ್ನ ಹಾಗೂ ಮಗಳು ರಕ್ಷಿತಾ ಮನೆಯಲ್ಲೇ ವಿಷ ಸೇವಿಸಿ ಮೃತಪಟ್ಟಿದ್ದಾರೆ. ಘಟನೆ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಸಾವಿಗೆ ಕಾರಣಗಳ ಬಗ್ಗೆ ಮಾಹಿತಿ ದೊರೆತಿದೆ. ಮೃತ ರಕ್ಷಿತಾಳ ಮದುವೆ ನಿಶ್ಚಯವಾಗಿದ್ದ ಸಂದರ್ಭದಲ್ಲಿ ಉಲ್ಲಾಸ್ ಗೌಡ ಎಂಬಾತ ಮೊಬೈಲ್ ಸಂದೇಶಗಳು ಹಾಗೂ ಫೋಟೋಗಳನ್ನು ಇಟ್ಟುಕೊಂಡು ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ಅಲ್ಲದೆ ಆ ಮಾಹಿತಿಯನ್ನು ಮದುವೆ ನಿಶ್ಚಯವಾಗಿದ್ದ ಯುವಕನಿಗೂ ಕಳುಹಿಸಿದ್ದರಿಂದ ಕುಟುಂಬ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿತ್ತು ಎಂದು ತಿಳಿದುಬಂದಿದೆ. ಡೆತ್‌ನೋಟ್ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೊಬೈಲ್ ಸಂದೇಶಗಳು, ಫೋಟೋಗಳು ಸೇರಿದಂತೆ ವಿವಿಧ ಪುರಾವೆಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಯ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರು ಕಿರುಕುಳ ಅಥವಾ ಮಾನಸಿಕ ಹಿಂಸೆ ಎದುರಾದರೆ ಕಾನೂನು ನೆರವು ಪಡೆಯುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

