ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ನಿಟ್ಟಿನಲ್ಲಿ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸೋಮವಾರ ಪರಿಶೀಲನೆ ನಡೆಸಿದರು. ನ್ಯಾಯಾಲಯದ ಆವರಣ ಹಾಗೂ ಕಟ್ಟಡದ ವಿವಿಧ ಭಾಗಗಳಲ್ಲಿ ಪರಿಶೀಲನೆ ನಡೆದಿದೆ.ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಉಡುಪಿ ಡಿವೈಎಸ್‌ಪಿ ಬೆಳ್ಳಿಯಪ್ಪ, ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಶೋಧ ಕಾರ್ಯ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

