ಬೆಂಗಳೂರು: ಕಿರುತೆರೆ ನಟಿ ಎಂದು ಪರಿಚಯಿಸಿಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ಹಣವಂತರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ನಟಿ ವನಿತಾಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆ ಸ್ನೇಹ ಬೆಳೆಸಿ, ಚಿನ್ನದ ಆಭರಣಗಳನ್ನು ಬಿಡಿಸಿಕೊಳ್ಳಲು ಹಣ ಬೇಕೆಂದು ನಂಬಿಸಿ ಸಾಲ ಪಡೆದು ಬಳಿಕ ಸಂಪರ್ಕ ಕಡಿತಗೊಳಿಸುತ್ತಿದ್ದಳು ಎನ್ನಲಾಗಿದೆ. ಯುವಕನೊಬ್ಬರಿಂದ 1 ಲಕ್ಷ ರೂ. ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈಕೆಯ ವಿರುದ್ಧ ನಗರದ ಇತರೆ ಠಾಣೆಗಳಲ್ಲಿಯೂ ದೂರುಗಳು ದಾಖಲಾಗಿವೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

