ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿರುವ ಮೂರು ಮಹಡಿಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 14 ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಕಟ್ಟಡದಲ್ಲಿ ಕೋಚಿಂಗ್ ಸೆಂಟರ್, ಲೈಬ್ರರಿ ಹಾಗೂ ಇತರೆ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದವು. ದಿಢೀರ್ ಕಾಣಿಸಿಕೊಂಡ ಬೆಂಕಿಯಿಂದ ವಿದ್ಯಾರ್ಥಿಗಳು ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಪರಿಣಾಮ ಹಲವರಿಗೆ ಗಂಭೀರ ಗಾಯಗಳಾಗಿವೆ. ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದೆಂದು ಶಂಕಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

