ಉಡುಪಿ ಜಿಲ್ಲೆಯಲ್ಲಿ ಒಂದು ತಿಂಗಳ ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಮತ್ ನರ್ಸಿಂಗ್ ಹೋಮ್‌ನ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ ಹಾಗೂ ಎಸ್. ಪ್ರಕಾಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಮಕ್ಕಳಿಲ್ಲದ ದಂಪತಿಗೆ ಆಸ್ಪತ್ರೆ ಮೂಲಕ ಹೆಣ್ಣು ಮಗುವನ್ನು ನೀಡಲಾಗಿದ್ದು, ಮಗುವಿನ ಜನನ ಪ್ರಮಾಣ ಪತ್ರ ಸೇರಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

