Breaking News

ಪೊಲೀಸ್ ಠಾಣೆಯಲ್ಲಿ ವೃದ್ಧ ಸಾ*ವು: ಎಎಸ್‌ಐ ವಿರುದ್ಧ ಕುಟುಂಬಸ್ಥರಿಂದ ಹಲ್ಲೆ ಆರೋಪ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕರಿಕಲ್ ಗ್ರಾಮದ 70 ವರ್ಷದ ರಾಜೇಸಾಬ್ ವಾಲಿಕಾರ್ ಅವರು ಪೊಲೀಸ್ ಕಸ್ಟಡಿಯಲ್ಲಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆಂದು ಅವರನ್ನು ನಾರಾಯಣಪುರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ವಿಚಾರಣೆ ವೇಳೆ ಕರ್ತವ್ಯದಲ್ಲಿದ್ದ ಎಎಸ್‌ಐ ಸಂಗಪ್ಪ ಅವರು ರಾಜೇಸಾಬ್ ಅವರಿಗೆ ದೈಹಿಕ ಹಿಂಸೆ ನೀಡಿದ್ದಾರೆ ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರ ಹಲ್ಲೆಯಿಂದಲೇ ಅವರು ಠಾಣೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಕುಟುಂಬಸ್ಥರು ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *