ಬೆಂಗಳೂರಿನಲ್ಲಿ ಸಾರ್ವಜನಿಕರನ್ನು ಬೆದರಿಸಿ ಹಣ ಹಾಗೂ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ನಯಿಂ (20) ಮತ್ತು ಸೈಯದ್ ವಸೀಂ (26) ಎಂದು ಗುರುತಿಸಲಾಗಿದೆ. ಅಮೃತಹಳ್ಳಿಯ ಕೃಷ್ಣಸ್ವಾಮಿ (70) ಅವರಿಗೆ ಚಾಕು ತೋರಿಸಿ ನಗದು ಕಸಿದುಕೊಂಡು ಆರೋಪಿಗಳು ಪರಾರಿಯಾಗಿದ್ದರು. ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಡಿಜೆ ಹಳ್ಳಿ ಮಸೀದಿ ಬಳಿ ಗಸ್ತಿನ ವೇಳೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುಲಿಗೆ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಗಳಿಂದ ಹಣ ಹಾಗೂ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

