Breaking News

ಅಪ್ರಾಪ್ತರ ಅಶ್ಲೀಲ ವೀಡಿಯೋ ಶೇರ್ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಾಪ್ತರ ಅಶ್ಲೀಲ ವಿಡಿಯೋಗಳನ್ನು ಹಂಚಿಕೊಂಡ ಇಬ್ಬರ ವಿರುದ್ಧ ಚಿಕ್ಕಮಗಳೂರಿನ ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಚಿಕ್ಕಮಗಳೂರು ಮಾರ್ಕೆಟ್ ರಸ್ತೆಯ ತಮಿಳು ಕಾಲನಿಯ ಜೀನತ್ ಬಾನು ಎಂಬುವರು ಅಪ್ರಾಪ್ತ ವಯಸ್ಸಿನ ಗಂಡು ಮಗುವಿನ ಖಾಸಗಿ ಅಂಗಗಳನ್ನು ತೋರಿಸುತ್ತಾ ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿರುವ 17 ಸೆಕೆಂಡ್ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ಸಿಇಎನ್ ಪೊಲೀಸರು ಜೀನತ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಚಿಕ್ಕಮಗಳೂರು ನಗರದ ಬಾರ್ಲೈನ್ ರಸ್ತೆಯ ಮುಬೀನಾ ತಾಜ್ ಎಂಬುವರು ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳು ನಗ್ನವಾಗಿ ಖಾಸಗಿ ಅಂಗಗಳನ್ನು ತೋರಿಸುತ್ತಾ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ 20 ಸೆಕೆಂಡ್ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *