Breaking News

ಗಿರವಿ ಇಟ್ಟಿದ್ದ ಚಿನ್ನ ವಾಪಸ್‌ ಕೇಳಿದ ರೈತನ ಮೇಲೆ ಅಂಗಡಿ ಮಾಲೀಕನಿಂದ ಫೈರಿಂಗ್!

ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ಬಂಗಾರ ಬಿಡಿಸಿಕೊಳ್ಳುವ ವಿಚಾರಕ್ಕೆ ನಡೆದ ಜಗಳ ಶೂಟೌಟ್‌ಗೆ ತಿರುಗಿದ್ದು, ಜ್ಯುವೆಲ್ಲರಿ ಅಂಗಡಿ ಮಾಲೀಕ ಮೌನೇಶ್ ಪತ್ತಾರ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾನೆ. ಘಟನೆಯಲ್ಲಿ ರೈತರಾದ ಸಿದ್ದಪ್ಪ ಮತ್ತು ನಿಂಗಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶ್ರದ್ಧಾ ಬೈಯಪ್ಪನವರ ಎಂಬ ಬಾಲಕಿಗೂ ಗುಂಡು ತಗುಲಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗುಂಡು ಹಾರಿಸಿದ ಬಳಿಕ ಆರೋಪಿ ಪರಾರಿಯಾಗಿದ್ದು, ಗರಗ ಪೊಲೀಸರು ಪ್ರಕರಣ ದಾಖಲಿಸಿ ಆತನ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *