Breaking News

ಭೀಮಾ ತೀರದಲ್ಲಿ ಪೊಲೀಸ್ ಫೈರಿಂಗ್ : 6 ಮಂದಿ ಹತ್ಯೆ ಪ್ರಕರಣ ಪ್ರಮುಖ ಆರೋಪಿ ಮಹೇಶ್‌ ಸೆರೆ

ವಿಜಯಪುರ ಜಿಲ್ಲೆಯ ಭೀಮಾತೀರ ಪ್ರದೇಶದಲ್ಲಿ ನಡೆದಿದ್ದ ಆರು ಮಂದಿಯ ಭೀಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹೇಶ್ ಚಂದ್ರಕಾಂತ್ ತಳವಾರ್ (29) ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಬಂಧನಕ್ಕೊಳಗಾಗಿದ್ದಾನೆ. ಇಟ್ಟಿಂಗಿಹಾಳ ಗ್ರಾಮದ ಬಳಿ ಅಡಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ಕಲ್ಲು ತೂರಿ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ಗಾಳಿಯಲ್ಲಿ ಎಚ್ಚರಿಕೆ ಗುಂಡು ಹಾರಿಸಿದರೂ ಶರಣಾಗದ ಕಾರಣ, ಆತ್ಮರಕ್ಷಣೆಗಾಗಿ ಹಾರಿಸಿದ ಗುಂಡು ಆರೋಪಿಯ ಬಲಗಾಲಿಗೆ ತಗುಲಿದೆ. ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೇ 29ರಂದು ಗೋವಿಂದಪುರ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಒಂದೇ ಕುಟುಂಬದ ಐವರು ಸೇರಿದಂತೆ ಆರು ಮಂದಿಯನ್ನು ಲಾಂಗ್, ಮಚ್ಚು ಹಾಗೂ ಗುಂಡಿನ ದಾಳಿಯಿಂದ ಹತ್ಯೆ ಮಾಡಲಾಗಿತ್ತು. ಈ ಕೊಲೆಗಾಗಿ ಆರೋಪಿ 15 ಲಕ್ಷ ರೂ. ಸುಪಾರಿ ಪಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಇದುವರೆಗೆ 38 ಮಂದಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *