Breaking News

ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ : ಲವರ್ ಜೊತೆ ಸೇರಿ ಮಗಳಿಂದಲೇ ಕೊಲೆ ಶಂಕೆ.!

ಬೆಂಗಳೂರು: ರಾಜಧಾನಿಯಲ್ಲಿ ಅತ್ಯಂತ ಘೋರ ಮತ್ತು ರಕ್ತಸಿಕ್ತ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಕೆ.ಆರ್.ಪುರಂ ವ್ಯಾಪ್ತಿಯ ಸೀಗೆಹಳ್ಳಿಯ ಮನೆಯೊಂದರಲ್ಲಿ ಈ ಕೃತ್ಯ ನಡೆದಿದೆ.ಕೊಲೆಯಾದವರನ್ನು ತಂದೆ ಸೋಮ ಸುಂದರ (55), ತಾಯಿ ಲಕ್ಷ್ಮೀ (48) ಮತ್ತು ಸಹೋದರಿ ಸುಪ್ರಿಯಾ (20) ಎಂದು ಗುರುತಿಸಲಾಗಿದೆ. ಕುಟುಂಬದ ಹಿರಿಯ ಪುತ್ರಿ ಶ್ವೇತಾ ಅವರ ಮೇಲೆಯೇ ಶಂಕೆ ವ್ಯಕ್ತವಾಗಿದೆ. ಶ್ವೇತಾ ತನ್ನ ಪ್ರಿಯಕರ ಕೆನತ್ ಜೊತೆ ಸೇರಿಕೊಂಡು ಈ ಇಡೀ ಕೃತ್ಯವನ್ನು ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ಶಂಕಿಸಲಾಗಿದೆ.ವಿಷಯ ತಿಳಿಯುತ್ತಿದ್ದಂತೆಯೇ ಕೆ.ಆರ್. ಪುರಂ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಶ್ವೇತಾ ಮತ್ತು ಆಕೆಯ ಪ್ರಿಯಕರ ಕೆನತ್‌ಗಾಗಿ ಜಾಲ ಬೀಸಿದ್ದಾರೆ. ಒಂದೇ ಮನೆಯಲ್ಲಿ ಮೂವರ ಶವಗಳು ಪತ್ತೆಯಾಗಿರುವುದು ಇಡೀ ಸೀಗೆಹಳ್ಳಿ ಪ್ರದೇಶದಲ್ಲಿ ತಲ್ಲಣ ಸೃಷ್ಟಿಸಿದೆ. ಪೊಲೀಸರ ಸಂಪೂರ್ಣ ತನಿಖೆಯ ಬಳಿಕವಷ್ಟೇ ಕೊಲೆಗೆ ನಿಖರವಾದ ಕಾರಣ ಏನೆಂಬುದು ಹೊರಬರಬೇಕಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *