Breaking News

ಕೊಡಗು ನ್ಯಾಯಾಲಯಕ್ಕೆ ಸಹನಾಳ ಈ ಮೇಲ್ ಬಾಂಬ್ ಬೆದರಿಕೆ: ಐಸಿಸ್ ದಾಳಿ ಎಚ್ಚರಿಕೆ, ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ!

ಕೊಡಗು ಜಿಲ್ಲಾ ಪ್ರಧಾನ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನ 2 ಗಂಟೆಗೆ ಸ್ಫೋಟ ನಡೆಸುವುದಾಗಿ ಹಾಗೂ ಐಸಿಸ್ ಉಗ್ರರ ದಾಳಿ ನಡೆಯಲಿದೆ ಎಂದು ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿದ್ದರಿಂದ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ತಕ್ಷಣ ಎಚ್ಚೆತ್ತುಕೊಂಡರು. ಮಾಹಿತಿ ದೊರೆಯುತ್ತಿದ್ದಂತೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳ ಹಾಗೂ ಪೊಲೀಸ್ ಅಧಿಕಾರಿಗಳು ನ್ಯಾಯಾಲಯ ಸಂಕೀರ್ಣದಲ್ಲಿ ಸುದೀರ್ಘ ಶೋಧ ಕಾರ್ಯ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ನ್ಯಾಯಾಧೀಶರು, ವಕೀಲರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಸ್ಥಳಾಂತರಿಸಲಾಗಿತ್ತು. ಆದರೆ ಸಂಪೂರ್ಣ ತಪಾಸಣೆ ಬಳಿಕ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದೆ, ಇದು ಹುಸಿ ಬಾಂಬ್ ಬೆದರಿಕೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಂತರ ನ್ಯಾಯಾಲಯದ ಕಾರ್ಯಚಟುವಟಿಕೆಗಳು ಪುನರಾರಂಭಗೊಂಡಿದ್ದು, ಇ-ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *