Breaking News

ತಿನ್ನಲು ಅನ್ನ ಕೇಳಿದ್ದಕ್ಕೆ ಹೋಟೆಲ್ ಮಾಲೀಕನಿಂದ ಅಲೆಮಾರಿ ದಂಪತಿ ಮೇಲೆ ಹಲ್ಲೆ..

ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಊಟ ಕೇಳಿದ್ದ ಅಲೆಮಾರಿ ದಂಪತಿ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಕುಮಟಾದ ಗೋವರ್ಧನ ಹೋಟೆಲ್‌ನಲ್ಲಿ ನಡೆದ ಘಟನೆಯಲ್ಲಿ ಹೋಟೆಲ್ ಮಾಲೀಕ ಗಣೇಶ್ ನಾಯಕ್ ಹಾಗೂ ವಾಚ್‌ಮನ್ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ದಂಪತಿ ಹೋಟೆಲ್‌ನಲ್ಲಿ ಆಹಾರ ಕೇಳಿದ್ದ ವೇಳೆ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯಗಳು ದಾಖಲಾಗಿವೆ. ಅಲೆಮಾರಿಯೊಬ್ಬ ಹೋಟೆಲ್ ಕಡೆ ಕಲ್ಲು ಎಸೆದಿದ್ದರಿಂದ ಕೋಪಗೊಂಡು ಹಲ್ಲೆ ನಡೆಸಿರಬಹುದು ಎಂಬ ಮಾಹಿತಿಯೂ ಲಭ್ಯವಾಗಿದೆ. ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಗಾಯಗೊಂಡ ರಮೇಶ್ ದ್ಯಾಮಣ್ಣ ಅಲೆಮಾರಿ ಮತ್ತು ದ್ಯಾಮವ್ವ ರಮೇಶ್ ಅಲೆಮಾರಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *