ಕುಣಿಗಲ್ ಸಮೀಪದ ಬಿಳಿದೇವಾಲಯದ ಬಳಿ ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಘಟನೆ ನಡೆದಿದೆ. ಆತನ ವರ್ತನೆ ಗಮನಿಸಿದ ಸಹ ಪ್ರಯಾಣಿಕರು ಹಾಗೂ ಮಹಿಳೆಯ ಪತಿ ತಕ್ಷಣ ಮಧ್ಯಪ್ರವೇಶಿಸಿ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರೋಪಿ ತಾನು ಸಾರಿಗೆ ಸಂಸ್ಥೆಯ ಸಿಬ್ಬಂದಿ ಎಂದು ಸುಳ್ಳು ಹೇಳಿ ಬಸ್ ಹತ್ತಿದ್ದಾನೆ ಎಂಬ ಮಾಹಿತಿ ಕೂಡ ಬೆಳಕಿಗೆ ಬಂದಿದೆ. ಪ್ರಯಾಣಿಕರು ಪ್ರಶ್ನಿಸುತ್ತಿದ್ದಂತೆ ಆತ ಬಸ್ಸಿನಿಂದ ಇಳಿದು ಪರಾರಿಯಾಗಲು ಯತ್ನಿಸಿದರೂ, ಮಹಿಳೆಯ ಪತಿ ಆತನನ್ನು ಹಿಡಿದು ತಪ್ಪಿಸಿಕೊಳ್ಳದಂತೆ ತಡೆದಿದ್ದಾರೆ. ಈ ಘಟನೆ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಬಸ್ಸುಗಳಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೆ ಪ್ರಶ್ನೆಗಳು ಉದ್ಭವಿಸಿವೆ. ಇಂತಹ ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

