Breaking News

ನಲ್ಲಿ ನೀರಿನಲ್ಲಿ ಕಾಲು ತೊಳೆಯಬೇಡ ಅಂದಿದ್ದಕ್ಕೆ ಪಿಜಿ ಮಾಲೀಕನ ಕೊಂದರು!

ಬೆಂಗಳೂರು ಕಸ್ತೂರಿನಗರದಲ್ಲಿ ಪಿಜಿ ಮಾಲೀಕ ಮಾಧವ್ ಮೇಟ್ಲಿ (37) ಅವರನ್ನು ಕ್ಷುಲ್ಲಕ ಜಗಳದ ವೇಳೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ರಾಕೇಶ್ (21) ಹಾಗೂ ಡಾನ್ ಬ್ರೈಟ್ಸನ್ (20) ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಲ್ಲಿ ನೀರಿನಲ್ಲಿ ಕಾಲು ತೊಳೆಯಬೇಡಿ ಎಂದು ಮಾಧವ್ ಹೇಳಿದ್ದಕ್ಕೆ ಜಗಳ ಆರಂಭವಾಗಿದೆ. ಬಳಿಕ ಆರೋಪಿಗಳು ಬ್ಯಾಟ್ ಕಸಿದುಕೊಂಡು ಮಾಧವ್ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಾಧವ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ರಾಮಮೂರ್ತಿ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *