Breaking News

ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್ ಫ್ಲೈಓವರ್ ಇಡೀ ಕಾಮಗಾರಿಯೇ ಕಳಪೆ: ಎಂಜಿನಿಯರ್‌ ತಂಡದಿಂದ ದೂರು

ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದ ಫ್ಲೈಓವರ್ ಕಾಮಗಾರಿಯ ಗುಣಮಟ್ಟದ ಬಗ್ಗೆ ತಾಂತ್ರಿಕ ತಜ್ಞರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. ಪರಿಶೀಲನೆ ವೇಳೆ ನಿರ್ಮಾಣಕ್ಕೆ ಬಳಸಿದ ಕಬ್ಬಿಣದ ಸರಳುಗಳು ಎರಡು ವರ್ಷಕ್ಕೂ ಹೆಚ್ಚು ಕಾಲ ಮಳೆ-ಗಾಳಿಗೆ ತೆರೆದುಕೊಂಡು ತುಕ್ಕು ಹಿಡಿದಿರುವುದು ಪತ್ತೆಯಾಗಿದೆ. ಸಾರ್ವಜನಿಕರು ಮತ್ತು ಕಾರ್ಮಿಕರ ಸುರಕ್ಷತೆಗೆ ಅಗತ್ಯ ಬ್ಯಾರಿಕೇಡ್‌ಗಳು ಹಾಗೂ ಎಚ್ಚರಿಕೆ ಕ್ರಮಗಳನ್ನು ಸಮರ್ಪಕವಾಗಿ ಕೈಗೊಂಡಿಲ್ಲ ಎಂದು ತಜ್ಞರು ಆರೋಪಿಸಿದ್ದಾರೆ. ಇದರಿಂದ ಅಪಘಾತಗಳ ಅಪಾಯ ಹೆಚ್ಚಿದ್ದು, ಈಗಾಗಲೇ ಕೆಲ ದುರ್ಘಟನೆಗಳು ಸಂಭವಿಸಿರುವುದಾಗಿ ತಿಳಿಸಿದ್ದಾರೆ. 2021ರಲ್ಲಿ ಆರಂಭವಾದ ಕಾಮಗಾರಿ ಐದು ವರ್ಷಗಳಾದರೂ ಪೂರ್ಣಗೊಳ್ಳದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ತಜ್ಞರು, ಈ ಕುರಿತ ವರದಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಲ್ಲಿಸಲು ನಿರ್ಧರಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *