Breaking News

ಪಾಕ್​​​​ ಸಂಘಟನೆಗಳ ಜೊತೆ ನಂಟು, ದಾವಣಗೆರೆಯಲ್ಲಿ ಮತ್ತೋರ್ವ ಶಂಕಿತ ಉಗ್ರ ಅರೆಸ್ಟ್!

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ 20 ವರ್ಷದ ಸುಯೇಲ್ ಎಂಬಾತನನ್ನು ಶಂಕಿತ ಉಗ್ರ ಚಟುವಟಿಕೆಗಳ ಆರೋಪದ ಮೇಲೆ ಬಂಧಿಸಲಾಗಿದೆ. ಇನ್‌ಸ್ಟಾಗ್ರಾಂ ಮೂಲಕ ಪಾಕಿಸ್ತಾನ ಮೂಲದ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ. ಕೇಂದ್ರ ಗುಪ್ತಚರ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಈ ಹಿಂದೆ ಬಂಧಿತರಾಗಿದ್ದ ಇಬ್ಬರು ಶಂಕಿತರ ಪ್ರಕರಣದ ಜಾಡು ಹಿಡಿದು ಸುಯೇಲ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *