Breaking News

74.68 ಲಕ್ಷ ರೂ. ಮೌಲ್ಯದ ವಿವಿಧ ಬ್ರಾಂಡ್‌ನ ಮದ್ಯ ಜಪ್ತಿ

ವಿಜಯಪುರ ಜಿಲ್ಲೆಯ ಕೊಲ್ಹಾರ ನಾಕಾ ಬಳಿ ಪೊಲೀಸರು ₹74.68 ಲಕ್ಷ ಮೌಲ್ಯದ ವಿವಿಧ ಬ್ರಾಂಡ್‌ಗಳ ಅಕ್ರಮ ಮದ್ಯವನ್ನು ಜಪ್ತಿ ಮಾಡಿದ್ದಾರೆ. ಗೋವಾದಿಂದ ಲಾರಿಯಲ್ಲಿ ಮದ್ಯವನ್ನು ಸಾಗಿಸಲಾಗುತ್ತಿತ್ತು. ಲಾರಿಯಲ್ಲಿದ್ದ ಗೊಬ್ಬರದ ಚೀಲಗಳ ಕೆಳಗೆ ಮದ್ಯದ ಬಾಕ್ಸ್‌ಗಳನ್ನು ಅಡಗಿಸಿಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಚಾಲಕರಿಗೆ ಗೂಗಲ್ ಲೊಕೇಷನ್ ಮೂಲಕ ಸೂಚನೆ ನೀಡಲಾಗುತ್ತಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಮದ್ಯದ ಮಾಲೀಕರು ಹಾಗೂ ಸಾಗಾಟದ ಜಾಲದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *