ಧಾರವಾಡ ತಾಲೂಕಿನ ಲಾಳಗಟ್ಟಿ ಗ್ರಾಮದಲ್ಲಿ ಚುಕ್ಕೆ ಜಿಂಕೆಯನ್ನು ಬೇಟೆಯಾಡಿ ಅದರ ಮಾಂಸ ಬೇಯಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಫಕ್ಕೀರಪ್ಪ ಮ್ಯಾಗಡಿ (42) ಮತ್ತು ವಾಸುದೇವ ನಾಯಕ (34) ಬಂಧಿತರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಆರೋಪಿಗಳನ್ನು ವಶಕ್ಕೆ ಪಡೆದು, ಜಿಂಕೆಯ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಮದ್ದುಗುಂಡು ಮತ್ತು ಮಾರಕಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ದಾಳಿಯ ಸುಳಿವು ಸಿಕ್ಕ ಬಳಿಕ ಪರಾರಿಯಾದ ಇತರ ಆರೋಪಿಗಳಿಗಾಗಿ ಅರಣ್ಯ ಇಲಾಖೆ ಶೋಧ ಕಾರ್ಯ ಮುಂದುವರಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

