Breaking News

ವಿಜಯಪುರ: ಹಣಕ್ಕಾಗಿ ವ್ಯಕ್ತಿ ಅಪಹರಣ; ಎಂಟು ಆರೋಪಿಗಳ ಬಂಧನ

ವಿಜಯಪುರದಲ್ಲಿ ವ್ಯಕ್ತಿಯೊಬ್ಬರನ್ನು ಅಪಹರಿಸಿ ₹12 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಗ್ಯಾಂಗ್‌ನ್ನು ಗಾಂಧಿ ಚೌಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯ ಅಡುಗೆ ಸಹಾಯಕ ಸಾಹಿಲ್‌ ಚಪ್ಪರಬಂಧ್‌ ಅವರನ್ನು ಅಪಹರಿಸಿ ಹಣಕ್ಕಾಗಿ ಒತ್ತಾಯ ಮಾಡಲಾಗಿತ್ತು. ಸಾಹಿಲ್‌ ಕುಟುಂಬವು ಇತ್ತೀಚೆಗೆ ಜಮೀನು ಮಾರಾಟ ಮಾಡಿದ್ದ ವಿಷಯ ತಿಳಿದಿದ್ದ ಸಹೋದ್ಯೋಗಿ ಮಹಮ್ಮದ್‌ ರಫೀಕ್‌ ಹಾಗೂ ಇತರರು ಸೇರಿ ಹನಿಟ್ರ್ಯಾಪ್‌ ಸಂಚು ರೂಪಿಸಿ ಅಪಹರಣ ನಡೆಸಿದ್ದರು. ಬಳಿಕ ಸಾಹಿಲ್‌ನ ಮೊಬೈಲ್‌ನಿಂದಲೇ ಆತನ ತಾಯಿಗೆ ಕರೆ ಮಾಡಿ ₹12 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಘಟಪ್ರಭಾ ಬಳಿ ಬಂಧಿಸಿ, ಸಾಹಿಲ್‌ನನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಅಪಹರಣಕ್ಕೆ ಬಳಸಿದ್ದ ಸ್ಕಾರ್ಪಿಯೋ ವಾಹನ ಹಾಗೂ ಏಳು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *