Breaking News

ಮಹಿಳೆಗೆ 4 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಹಿರಿಯಡ್ಕ: ಮಹಿಳೆಯೊಬ್ಬರಿಗೆ ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಶೀಲಾವತಿ ಎಂಬವರ ಮೊಬೈಲ್‌ಗೆ ಕಳೆದ 2 ತಿಂಗಳುಗಳ ಹಿಂದೆ ಅಪರಿಚಿತರು ವೆಬ್‌ಸೈಟ್ ಲಿಂಕ್ ಕಳುಹಿಸಿ, ಇದರಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಕೊಡುವುದಾಗಿ ನಂಬಿಸಿದ್ದರು. ಅದರಂತೆ ಶೀಲಾವತಿ ಹಂತ ಹಂತವಾಗಿ 4,02,000ರೂ. ಹಣವನ್ನು ಹೂಡಿಕೆ ಮಾಡಿದ್ದರು. ನಂತರ ಸ್ವಲ್ಪ ಹಣವನ್ನು ಆರೋಪಿಗಳು ವಾಪಾಸ್ಸು ನೀಡಿದ್ದರು. ಉಳಿದ 3,50,000ರೂ. ಹಣವನ್ನು ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *