ದಿಲ್ಲಿಯಲ್ಲಿ 10 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕ ಬಬ್ಲುವನ್ನು ಪೊಲೀಸರು ಬಂಧಿಸಿದ್ದಾರೆ. ಪಾದಚಾರಿ ಮಾರ್ಗದಲ್ಲಿ ಮಲಗಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು, ನಿರ್ಜನ ಪ್ರದೇಶದಲ್ಲಿ ಅಪರಾಧ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸಿಸಿಟಿವಿ, ಜಿಪಿಎಸ್ ಹಾಗೂ ಮೊಬೈಲ್ ಲೊಕೇಶನ್ ಮಾಹಿತಿ ಆಧರಿಸಿ ಆರೋಪಿಯನ್ನು ನಾಲ್ಕು ಗಂಟೆಗಳೊಳಗೆ ಬಂಧಿಸಲಾಗಿದೆ. ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ಆತನ ಕಾಲಿಗೆ ಗುಂಡು ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

