ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಅಡಗಿದ್ದ ಉತ್ತರ ಪ್ರದೇಶ ಮೂಲದ 20 ವರ್ಷದ ಸುಹೇಲ್ ಎಂಬ ಶಂಕಿತನನ್ನು ಕೇಂದ್ರ ಗುಪ್ತಚರ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಅಯೋಧ್ಯೆಯ ರಾಮ ಮಂದಿರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಉದ್ದೇಶ ಹೊಂದಿದ್ದಾನೆ ಎಂಬ ಮಾಹಿತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಆತನ ಮೊಬೈಲ್‌ನಲ್ಲಿ ಪಾಕಿಸ್ತಾನ ಮೂಲದ ಸಂಪರ್ಕಗಳು, ಆಕ್ಷೇಪಾರ್ಹ ದಾಖಲೆಗಳು ಹಾಗೂ ಶಸ್ತ್ರಾಸ್ತ್ರಗಳ ಫೋಟೋಗಳು ಪತ್ತೆಯಾಗಿವೆ ಎನ್ನಲಾಗಿದೆ. ಸದ್ಯ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

