Breaking News

ವಾರಕ್ಕೊಂದು ಬೈಕ್ ಕದಿಯುತ್ತಿದ್ದ ‘ಸ್ಪ್ಲೆಂಡರ್ ಸಿದ್ದಾರೆಡ್ಡಿ’ ಬಳ್ಳಾರಿಯಲ್ಲಿ ಅಂದರ್!

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪೊಲೀಸರು ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿ, ಆಟೋ ಚಾಲಕ ಸಿದ್ದಾರೆಡ್ಡಿ ಅಲಿಯಾಸ್ ‘ಸ್ಪ್ಲೆಂಡರ್’ ಸಿದ್ದಾರೆಡ್ಡಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 20.50 ಲಕ್ಷ ರೂ. ಮೌಲ್ಯದ 41 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ಒಂದೂವರೆ ವರ್ಷದಿಂದ ನಕಲಿ ಕೀ ಬಳಸಿ ಬೈಕ್‌ಗಳನ್ನು ಕದಿಯುತ್ತಿದ್ದ ಆರೋಪಿ, ನಕಲಿ ಆರ್‌ಸಿ ಕಾರ್ಡ್‌ಗಳನ್ನು ಸೃಷ್ಟಿಸಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಬಳ್ಳಾರಿ, ಚಿತ್ರದುರ್ಗ, ವಿಜಯನಗರ ಹಾಗೂ ಆಂಧ್ರಪ್ರದೇಶದಲ್ಲಿ ಒಟ್ಟು 41 ಬೈಕ್‌ಗಳನ್ನು ಕದ್ದಿರುವುದಾಗಿ ಆತ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *