Breaking News

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕರಿಂದ 5 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್.!

ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಮೂರು ವರ್ಷಗಳ ಹಿಂದೆ ನಡೆದಿದ್ದ ಸಾಮೂಹಿಕ ಅತ್ಯಾಚಾರದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇಬ್ಬರು ಅಪ್ರಾಪ್ತರು ಈ ಕೃತ್ಯ ಎಸಗಿದ್ದು, ಘಟನೆಯನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದರೆಂದು ಆರೋಪಿಸಲಾಗಿದೆ. ಇತ್ತೀಚೆಗೆ ಆ ವಿಡಿಯೋ ಹೊರಬಂದ ನಂತರ ಪ್ರಕರಣ ಬಹಿರಂಗಗೊಂಡಿದೆ. ಆರೋಪಿಗಳ ಕಡೆಯವರು ಬೆದರಿಕೆ ಒಡ್ಡಿದರೂ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಮತ್ತೊರ್ವ ಆರೋಪಿ ಸೆರೆ

ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು …

Leave a Reply

Your email address will not be published. Required fields are marked *