Breaking News

ಕರೆಂಟ್ ಕಟ್ ಮಾಡಿದ್ದಕ್ಕೆ ಜೆಸ್ಕಾಂ ಕಚೇರಿಗೆ ಬೆಂಕಿ ಇಟ್ಟ ವ್ಯಕ್ತಿ.!

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಅಡಿಗೆಬೈಲು ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬಳ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಭೀಕರ ಸ್ವರೂಪ ಪಡೆದುಕೊಂಡಿದೆ. ಶೇಷಗಿರಿ (40) ಹಾಗೂ ಅರುಣ್ (35) ನಡುವೆ ಕಳೆದ ಕೆಲವು ದಿನಗಳಿಂದ ಮನಸ್ತಾಪವಿದ್ದು, ಅದು ಮಾರಾಮಾರಿಗೆ ತಿರುಗಿದೆ. ಜಗಳದ ವೇಳೆ ಶೇಷಗಿರಿ ಲಾಂಗ್‌ನಿಂದ ಅರುಣ್ ಮೇಲೆ ದಾಳಿ ನಡೆಸಿದ್ದಾನೆ. ಜೀವ ಉಳಿಸಿಕೊಳ್ಳಲು ಅರುಣ್ ಕೈ ಅಡ್ಡಹಿಡಿದಾಗ, ಮಣಿಕಟ್ಟಿನಿಂದ ಕೈ ಸಂಪೂರ್ಣವಾಗಿ ತುಂಡಾಗಿ ನೆಲಕ್ಕೆ ಬಿದ್ದಿದೆ. ತೀವ್ರ ರಕ್ತಸ್ರಾವದಿಂದ ಅರುಣ್ ಸ್ಥಳದಲ್ಲೇ ಒದ್ದಾಡಿದ್ದಾನೆ. ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಘಟನೆ ಕುರಿತು ಬಾಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *