Breaking News

ಬಾಲಕಿ ಕರೆದೊಯ್ದ ಯುವಕನ ಪೋಕ್ಸೊ ಕಾಯ್ದೆಯಡಿ ಬಂಧನ

ಕೊಳ್ಳೇಗಾಲ: ಬಾಲಕಿಯನ್ನು ಮನೆಯಿಂದ ಕರೆದುಕೊಂಡು ಹೋಗಿದ್ದ ಯುವಕನನ್ನು ನಗರ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ. ನಗರದ ಬಳೆಪೇಟೆ ಬಡಾವಣೆ ನಿವಾಸಿ ಚಂದನ್ (23) ಬಂಧಿತ. ಈತ ಬಡಾವಣೆಯೊಂದರ ಬಾಲಕಿಯನ್ನು ಪ್ರೀತಿಸುವುದಾಗಿ ಮನೆಯಿಂದ ಕರೆದುಕೊಂಡು ಹೋಗಿದ್ದನು. ಈ ಕುರಿತು ಬಾಲಕಿಯ ಪಾಲಕರು ತಮ್ಮ ಮಗಳು ಕಾಣೆಯಾಗಿದ್ದಾಳೆಂದು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಾಪತ್ತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಖಚಿತ ಮಾಹಿತಿ ಸಂಗ್ರಹಿಸಿ, ಯುವಕನೊಂದಿಗೆ ಬಾಲಕಿ ಮೈಸೂರಿನಲ್ಲಿ ವಾಸ್ತವ್ಯ ಮಾಡಿರುವುದನ್ನು ಪತ್ತೆ ಹಚ್ಚಿ ಯುವಕನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *