Breaking News

30 ಲಕ್ಷ ರೂ. ವಿಮೆ ಹಣದ ಆಸೆಗಾಗಿ ತಮ್ಮನನ್ನೇ ಕೊಂದ ಪಾಪಿ ಅಣ್ಣ!

ತುಮಕೂರು ಜಿಲ್ಲೆಯಲ್ಲಿ ಎಲ್‌ಐಸಿ ವಿಮೆ ಹಣಕ್ಕಾಗಿ ಅಣ್ಣನೇ ತಮ್ಮನನ್ನು ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ರಮೇಶ್ (35) ಹೆಸರಿನಲ್ಲಿ 15 ಲಕ್ಷ ರೂ. ವಿಮೆ ಪಾಲಿಸಿ ಮಾಡಿಸಿದ್ದ ಹನುಮಂತರಾಜು, ಅಪಘಾತದಲ್ಲಿ ಮೃತಪಟ್ಟರೆ 30 ಲಕ್ಷ ರೂ. ಸಿಗುತ್ತದೆ ಎಂಬ ಕಾರಣಕ್ಕೆ ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 19ರಂದು ನಿಧಿ ಪೂಜೆ ನೆಪದಲ್ಲಿ ರಮೇಶ್‌ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ, ಬಳಿಕ ವೈರ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ನಂತರ ಶವ ಮತ್ತು ಬೈಕ್‌ನ್ನು ರಸ್ತೆಯಲ್ಲಿ ಬಿಟ್ಟು ಅಪಘಾತದ ನಾಟಕ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಮೃತನ ಹಿರಿಯ ಸಹೋದರ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿ, ಹನುಮಂತರಾಜು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *