ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ 8ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕ ಹನುಮಂತಪ್ಪ (54)ನನ್ನು ಪೊಲೀಸರು ಬಂಧಿಸಿದ್ದಾರೆ. “ಯೂನಿಫಾರ್ಮ್ ಕೊಡಿಸುತ್ತೇನೆ” ಎಂದು ಹೇಳಿ ವಿದ್ಯಾರ್ಥಿನಿಯನ್ನು ಪ್ರತ್ಯೇಕ ಕೋಣೆಗೆ ಕರೆದೊಯ್ದು ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಘಟನೆಯ ಬಳಿಕ ವಿದ್ಯಾರ್ಥಿನಿ ಮನೆಗೆ ತೆರಳಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಇದರಿಂದ ಆಕ್ರೋಶಗೊಂಡ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಗೆ ತೆರಳಿ ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಹಿತಿ ತಿಳಿದ ಇಟ್ಟಿಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

