Breaking News

PWD ಎಂಜಿನಿಯರ್ ಗೆ ಹಣಕ್ಕೆ ಬೇಡಿಕೆ ಇಟ್ಟ ನಕಲಿ ಲೋಕಾಯುಕ್ತ ಅಧಿಕಾರಿ ಅರೆಸ್ಟ್

ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಯ ಹೆಸರಿನಲ್ಲಿ ವಾಟ್ಸಾಪ್ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ವಂಚಿಸಲು ಯತ್ನಿಸಿದ್ದ ಆಂಧ್ರಪ್ರದೇಶ ಮೂಲದ ಧನಂಜಯ ರೆಡ್ಡಿ (33) ಎಂಬ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ತಾನು ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಪರಿಚಯಿಸಿಕೊಂಡು, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದಲ್ಲಿ ‘ಬಿ’ ರಿಪೋರ್ಟ್ ಸಲ್ಲಿಸಲು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರಿನ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು ಆಂಧ್ರಪ್ರದೇಶದ ಕದಿರಿ ನಗರದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *