Breaking News

ಆಮ್ಲೆಟ್ ವಿಚಾರಕ್ಕೆ ಜಗಳ : ಆಟೋ ಚಾಲಕನ ಹತ್ಯೆ

ಕಲಬುರಗಿ ನಗರದ ಗಂಜ್ ಪ್ರದೇಶದಲ್ಲಿ ಆಮ್ಲೆಟ್ ವಿಚಾರವಾಗಿ ನಡೆದ ಮಾತಿನ ಚಕಮಕಿ ಆಟೋ ಚಾಲಕನೊಬ್ಬನ ಹತ್ಯೆಯಲ್ಲಿ ಅಂತ್ಯಗೊಂಡಿದೆ. ನೂರ್‌ಬಾಗ್ ಬಡಾವಣೆಯ ನಿವಾಸಿ ಹಾಗೂ ಆಟೋ ಚಾಲಕ ಮುಹಮ್ಮದ್ ರಯೀಸ್ (30) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಆಮ್ಲೆಟ್ ಅಂಗಡಿಯಲ್ಲಿ ಕೆಲ ಯುವಕರೊಂದಿಗೆ ವಾಗ್ವಾದ ನಡೆದಿದ್ದು, ಅದು ತೀವ್ರ ಸ್ವರೂಪ ಪಡೆದುಕೊಂಡಿದೆ. ಕೋಪಗೊಂಡ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ರಯೀಸ್ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿ ಪರಾರಿಯಾಗಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚೌಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *