ಮಂಗಳೂರಿನ ವಳಚ್ಚಿಲ್ ರೈಲ್ವೇ ಗೇಟ್ ಸಮೀಪ ಅಡ್ಯಾರ್ ಫಾಲ್ಸ್‌ಗೆ ದಾರಿ ಕೇಳಲು ಹೋದ ವ್ಯಕ್ತಿಯೊಬ್ಬನನ್ನು ಬೆದರಿಸಿ ಸುಲಿಗೆ ಮಾಡಿದ ಘಟನೆ ನಡೆದಿದೆ. ಪ್ರಜ್ವಲ್ ಎಂಬವರು ತಮ್ಮ ಗೆಳತಿಯೊಂದಿಗೆ ಬೈಕ್‌ನಲ್ಲಿ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ದಾರಿ ಕೇಳಲು ಮನೆಯೊಂದರ ಬಳಿ ಹೋದಾಗ ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚೂರಿ ತೋರಿಸಿ ಜೀವಬೆದರಿಕೆ ಹಾಕಿದ್ದಾನೆ. ಬಳಿಕ ಪ್ರಜ್ವಲ್ ಕೈಯಲ್ಲಿದ್ದ ಬೆಳ್ಳಿಯ ಬ್ರಾಸ್‌ಲೆಟ್ ಹಾಗೂ ಉಂಗುರವನ್ನು ಕಿತ್ತುಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಯ ಬಳಿಕ ಪ್ರಜ್ವಲ್ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

