ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರಾದಾಳ ಗ್ರಾಮದ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ದೇವರಾಜ್ (19), ಲಕ್ಷ್ಮಿಕಾಂತ್ (20) ಹಾಗೂ ಪ್ರಕಾಶ್ (23) ಎಂದು ಗುರುತಿಸಲಾಗಿದೆ. ಚಿತ್ತಾಪುರದಿಂದ ಸನ್ನತಿ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಬಸ್‌ನ ಚಕ್ರಗಳು ಯುವಕರ ಮೇಲೆ ಹರಿದ ಪರಿಣಾಮ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು, ಆಕ್ರಂದನ ಮುಗಿಲುಮುಟ್ಟಿತು. ಚಿತ್ತಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

