Breaking News

ಚಿಕ್ಕಬಳ್ಳಾಪುರದಲ್ಲಿ ಗಾಂಜಾ ಮಾರಾಟ; ಮೂವರ ಬಂಧನ

ಚಿಕ್ಕಬಳ್ಳಾಪುರ ನಗರದ ನಿಮ್ಮಾಕಲಕುಂಟೆ–ಗಂಗಮ್ಮನ ಮಿದ್ದೆ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 10.790 ಕೆ.ಜಿ ಗಾಂಜಾ ಸೊಪ್ಪು ವಶಪಡಿಸಿಕೊಳ್ಳಲಾಗಿದೆ. ರಾಜಸ್ಥಾನದ ಬುದ್ದಾರಾಂ (30), ಅರವಿಂದ್ ಕುಮಾರ್ (19) ಹಾಗೂ ಚಿಕ್ಕಬಳ್ಳಾಪುರದ ಸೈಯದ್ ಅಹಮದ್ (26) ಬಂಧಿತರಾಗಿದ್ದು, ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಆಂಧ್ರಪ್ರದೇಶದಿಂದ ಗಾಂಜಾ ತಂದು ಚಿಲ್ಲರೆ ಮಾರಾಟ ಮಾಡುತ್ತಿದ್ದರು ಎಂಬುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *