Breaking News

ಯುವತಿ ಆತ್ಮಹತ್ಯೆ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ

ಸುರತ್ಕಲ್‌ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಅನೀಶ್ ಪೂಜಾರಿ ವಿರುದ್ಧ ಪೋಕ್ಸೊ, ಅತ್ಯಾಚಾರ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದರಿಂದ ಬಾಲಕಿ ಗರ್ಭಿಣಿಯಾಗಿದ್ದಳು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಗರ್ಭಧಾರಣೆಯ ವಿಷಯ ತಿಳಿಸಿದಾಗ ಯುವಕ ನಿರಾಕರಿಸಿ ನಿಂದಿಸಿದ್ದಾನೆ ಎನ್ನಲಾಗಿದ್ದು, ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕೆ ವಿಶೇಷ ತಂಡ ರಚಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *