Breaking News

ಕರೆಂಟ್‌ ಕಟ್‌ ಮಾಡಿದ್ದಕ್ಕೆ ಜೆಸ್ಕಾಂ ಕಚೇರಿಗೇ ಬೆಂಕಿ ಹಚ್ಚಿ ಸುಟ್ಟ ರೈತ!

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದ ಜೆಸ್ಕಾಂ ಉಪ ಕಚೇರಿಗೆ ರೈತನೊಬ್ಬ ಬೆಂಕಿ ಹಚ್ಚಿದ ಘಟನೆ ನಡೆದಿದೆ. ₹11 ಸಾವಿರ ವಿದ್ಯುತ್ ಬಿಲ್‌ ಬಾಕಿ ಉಳಿಸಿಕೊಂಡಿದ್ದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಆತ ಆಕ್ರೋಶಗೊಂಡಿದ್ದಾನೆ ಎನ್ನಲಾಗಿದೆ. ಹಳ್ಳಿಹೊಸೂರು ಗ್ರಾಮದ ಶಿವಪ್ಪ ಬಸನಗೌಡ ಗಡಿಗಿ ಎಂಬಾತ ಜೆಸ್ಕಾಂ ಕಚೇರಿಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ದಾಖಲೆಗಳು, ಕಂಪ್ಯೂಟರ್, ಲ್ಯಾಪ್‌ಟಾಪ್ ಸೇರಿದಂತೆ ಸುಮಾರು ₹1 ಲಕ್ಷ ಮೌಲ್ಯದ ಆಸ್ತಿ ಸುಟ್ಟುಹೋಗಿದೆ. ಸಿರವಾರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *